Thursday, November 28, 2024
Thursday, November 28, 2024

Eshwar Khandre “ಟಾಕ್ಸಿಕ್” ಸಿನಿಮಾ ಶೂಟಿಂಗಿಗಾಗಿ ಮರಕಡಿತಲೆ.ಸಚಿವ ಈಶ್ವರ ಖಂಡ್ರೆ ಆರೋಪ”

Date:

Eshwar Khandre ಹೆಚ್‌.ಎಂ.ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಕುರಿತ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು “ಹೆಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

“ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ.

Eshwar Khandre ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನಿನ ಮರ, ಗಿಡಗಳನ್ನು ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆಗೆ ಕೊಟ್ಟಿದೆ. ಈ ಮೂಲಕ ದುಡ್ಡು ಮಾಡುತ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ರೀತಿ ಮಾಡಲು ಅವರಿಗೆ ಯಾವುದೇ ಅಧಿಕಾರ ಇಲ್ಲ” ಎಂದಿದ್ದಾರೆ.

“ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ನಾನು ಖುದ್ದಾಗಿ ಹೋಗಿ ನೋಡಿದ್ದೇನೆ. ಅಲ್ಲಿನ ಸಂಪೂರ್ಣ ಚಿತ್ರಣ ಬದಲಾಗಿದೆ, ವಿಲೇಜ್ ರೀತಿಯ ಸೆಟ್ ಹಾಕಿದ್ದಾರೆ. ಇದು ಬಿಬಿಎಂಪಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಕಾನೂನು ಕ್ರಮಕ್ಕೆ ಪಾಲಿಕೆಗೂ ಪತ್ರ ಬರೆದಿದ್ದೇನೆ. ಅವರು (ಬಿಬಿಎಂಪಿ) ಕಮಿಟಿ ಮಾಡಿದ್ದಾರೆ, ನೋಟಿಸ್ ಕೊಟ್ಟಿದ್ದಾರೆ. ಚಿತ್ರ ತಂಡದ್ದೇ ತಪ್ಪು ಅಂತ ನಾನು ಹೇಳುತ್ತಿಲ್ಲ. ಯಾರದ್ದು ತಪ್ಪು ಇದೆಯೋ ನೋಡಬೇಕು. ಸಿನಿಮಾ ತಂಡ ಅನುಮತಿ ಪಡೆದಿದೆಯಾ? ಅಂತ ತನಿಖೆ ಮಾಡಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Rangayana ನ.30 ರಂದು ರಂಗಾಯಣದಲ್ಲಿ ಏಕಲವ್ಯ ನಾಟಕ ಪ್ರದರ್ಶನ

Shivamogga Rangayana ಶಿವಮೊಗ್ಗ ರಂಗಾಯಣವು ನ.30 ರಂದು ಸಂಜೆ 6.30 ಕ್ಕೆ...

MESCOM ನ. 29 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ತ್ಯಾವರೆಚಟ್ನಹಳ್ಳಿ, ಈಶ್ವರ್...

National Adoption Month ಪೋಷಕತ್ವ ಯೋಜನೆಯಡಿ ಮಗು ಪಡೆಯಲು ಪೋಷಕರಿಂದ ಅರ್ಜಿ ಆಹ್ವಾನ

National Adoption Month ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ...

Shivamogga City Corporation ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ: ಡಿ.04ಕ್ಕೆ ಮುಂದೂಡಿಕೆ

Shivamogga City Corporation ನ.30 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ...