Saturday, November 23, 2024
Saturday, November 23, 2024

Madhya Pradesh ಹುಲಿ ಮೀಸಲು ಅರಣ್ಯದಲ್ಲಿ ಹತ್ತು ಆನೆಗಳ ನಿಗೂಢ ಸಾವು.ತನಿಖೆಗೆ ಕ್ರಮ

Date:

Madhya Pradesh ಮಧ್ಯ ಪ್ರದೇಶದ ಬಂಧವ್‌ಗಢ್ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಒಂದೇ ವಾರದಲ್ಲಿ 10 ಆನೆಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ರಾಜ್ಯ ಹಾಗು ಕೇಂದ್ರ ಸರ್ಕಾರ ತನಿಖೆಗೆ ಕ್ರಮ ಕೈಗೊಂಡಿದೆ.
ನಾಲ್ಕು ಆನೆಗಳು ಬಂಧವ್‌ಗಢ್ ಹುಲಿ ರಕ್ಷಿತಾರಣ್ಯದ ಕಿತೋಲಿ ವಲಯದ ಸಂಖನಿ ಮತ್ತು ಬಕೇಲಿ ಎಂಬಲ್ಲಿ ಅಕ್ಟೋಬರ್ 29ರಂದು ಸಾವನ್ನಪ್ಪಿದರೆ, ಇನ್ನುಳಿದ ನಾಲ್ಕು ಆನೆಗಳು ಅಕ್ಟೋಬರ್ 30ರಂದು ಹಾಗು ಉಳಿದ 2 ಆನೆಗಳು ಮರುದಿನ ಅಸುನೀಗಿವೆ.
ಆನೆಗಳಿಗೆ ವಿಷಪ್ರಾಶನ?: ಮಧ್ಯ ಪ್ರದೇಶ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ವರದಿಗಳು, ವಿಷ ಪ್ರಾಶನದಿಂದ ಆನೆಗಳು ಸಾವನ್ನಪ್ಪಿರುವ ಸಾಧ್ಯತೆಯ ಕುರಿತು ತಿಳಿಸಿವೆ.
ವನ್ಯಜೀವಿಗಳ ಮೇಲಿನ ಅಪರಾಧಗಳ ನಿಯಂತ್ರಣ ಬ್ಯೂರೋ (WCCB) ತನಿಖೆಗೆ ತಂಡ ರಚಿಸಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತನ್ನ ಹೇಳಿಕೆ ಬಿಡುಗಡೆ ಮಾಡಿದೆ.
Madhya Pradesh ಮಧ್ಯ ಪ್ರದೇಶ ಸರ್ಕಾರ ಕೂಡಾ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ ವಿಭಾಗ) ಇವರ ನೇತೃತ್ವದಲ್ಲಿ ಐವರ ಸಮಿತಿ ರಚಿಸಿ ಘಟನೆಗೆ ಕಾರಣ ತಿಳಿಯಲು ನಿರ್ಧರಿಸಿದೆ.
ಇದರ ನಡುವೆ ರಾಜ್ಯ ಟೈಗರ್ ಸ್ಟೈಕ್ ಫೋರ್ಸ್‌ (STSF) ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡುತ್ತಿದೆ. ಆನೆಗಳು ಸಾವನ್ನಪ್ಪಿದ ಅರಣ್ಯ ಪ್ರದೇಶ ಮತ್ತು ಸಮೀಪದ ಗ್ರಾಮಗಳಲ್ಲಿ ಎಸ್‌ಟಿಎಸ್ಎಫ್ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ರಾಜ್ಯ ವನ್ಯಜೀವಿ ಅಧಿಕಾರಿಗಳ ಪ್ರಕಾರ, ವಿಸ್ತೃತ ಮರಣೋತ್ತರ ವರದಿ, ಪೂರಕ ಸಾಕ್ಷ್ಯಾಧಾರಗಳಿಂದ ಕೂಡಿದ ಆಳವಾದ ತನಿಖೆಯ ನಂತರವಷ್ಟೇ ಆನೆಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಇಂಥ ಘಟನೆಗಳು ಮರುಕಳುಹಿಸುವುದನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಬಂಧವ್‌ಗಢ್ ಹುಲಿ ರಕ್ಷಿತಾರಣ್ಯದ ಸುತ್ತಮುತ್ತಲ ಪ್ರದೇಶಗಳಲ್ಲಿ ಆನೆಗಳ ಹಿಂಡಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shanthala Spherocast Private Limited ವಿದ್ಯಾರ್ಥಿಗಳು ಉತ್ತಮ ಯೋಚನೆಯೊಂದಿಗೆತಮ್ಮ ಜೀವನ ರೂಪಿಸಿಕೊಳ್ಳಬೇಕು- ಟಿ.ಎಸ್.ಹೂವಯ್ಯ

Shanthala Spherocast Private Limited ಶಿವಮೊಗ್ಗದ ಹೆಸರಾಂತ ಸಂಸ್ಥೆಯಾದ ಶಾಂತಲಾ ಸ್ಟೆರೋಕ್ಯಾಸ್ಟ್...

State Central Library ಕೇಂದ್ರ ಗ್ರಂಥಾಲಯಕ್ಕೆ ಪುಸ್ತಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ‌ಆಹ್ವಾನ

State Central Library 2024ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗಿರುವ ಸಾಹಿತ್ಯ,...

Karnataka Congress ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶ

Karnataka Congress ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್...