Saturday, November 23, 2024
Saturday, November 23, 2024

ಪೈಲ್ವಾನರೆರ ..ಹಿಡೀರಿ ಹೋರಿ! ಹರಿ ಕೊಬ್ಬರಿ.. “ಸೊರಬ ತಾಲ್ಲೂಕಿನ ತಾವರೆಕೊಪ್ಪದಲ್ಲಿ ಹೋರಿ ಹಬ್ಬ ಜೋರು

Date:

ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬ ಅಕ್ಷರಶಃ ರೋಚಕತೆ ತಂದಿತ್ತು. ನೆರೆದವರ ಕೇಕೆ, ಹಲಗೆ ಸದ್ದಿಗೆ ಹೋರಿಗಳ ಹೂಂಕರಿಸುವಿಕೆ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.
ಮಲೆನಾಡು ಹಾಗೂ ಬಯಲುಸೀಮೆ ಭಾಗದ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಸಡಗರ ಸಂಭ್ರಮದಿಂದ ಜರುಗಿತು. ದೀಪಾವಳಿಯ ನಂತರ ಗ್ರಾಮೀಣ ಭಾಗದಲ್ಲಿ ಹೋರಿ ಬೆದರಿಸುವ ಹಬ್ಬಕ್ಕೆ ಸಾಕಷ್ಟು ಮಹತ್ವವಿದೆ. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರಲ್ಲಿ ಮೈನವಿರೇಳಿಸಿತು. ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಟೇಪು, ಬಲೂನುಗಳು ಮತ್ತು ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು.
ಅಖಾಡದಲ್ಲಿ ತಾವರೆಕೊಪ್ಪದ ರಾಜನರಸಿಂಹ, ರಾಜಾ ಹುಲಿ, ಶ್ರೀವೀರ ಕಲ್ಕಿ, ನಾಗನೂರ ನಾಗರಹಾವು, ನರಹಂತಕ, ಚಿಕ್ಕಸವಿ ದೊಡ್ಮನೆ ದೊರೆ, ಶಾಂತಗೇರಿ ಸುಗ್ರೀವ, ಹರೂರು ಘಟಸರ್ಪ, ಯಲವಳ್ಳಿ ಜಮೀನ್ದಾರ, ತಾವರೆಕೊಪ್ಪ ಚಕುವ, ಬಿದರಗೇರಿ ಸ್ನೇಹಜೀವಿ ಶ್ರೀನಂದಿ, ಕೊಲೆಗಾರ ಸಾಮ್ರಾಜ್ಯದ ಪ್ರಳಯ, ಹರಗಿ ಗ್ಯಾಂಗ್ ಸ್ಟಾರ್, ಮಲೆನಾಡ ಹುಲಿ, ಶಿಗ್ಗಾದ ಮೆಜೆಸ್ಟಿಕ್ ಹುಲಿ, ಅಂಬರಕೊಪ್ಪದ ಕಿಂಗ್, ಸೊರಬದ ಸೃಷ್ಟಿಕರ್ತ, ಪೈಲ್ವಾನ, ಸೊರಬದ ಸೈಕೋ, ಬಿದರೇರಿ ಬುಲೇಟ್ ಕಾ ರಾಜ, ಎಎನ್‌ಕೆ ಬ್ಲಾಕ್ ಟೈಗರ್, ಹರೂರು ಜೈ ಹನುಮ, ಹರೂರು ಮಾರಿಕಾಂಬ ಎಕ್ಸ್ಪ್ರೆಸ್, ಬಿದರಗೇರಿ ಸೆವೆನ್ ಸ್ಟಾರ್ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊAಡರು.
ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕು ಸೇರಿದಂತೆ ನೆರೆಯ ತಾಲೂಕು ಮತ್ತು ಜಿಲ್ಲೆಯ ವಿವಿಧ ಗ್ರಾಮಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರಿಯರು ಆಗಮಿಸಿದ್ದರು. ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದವು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲಪ್ರದರ್ಶನ ತೋರಿದ ಪೈಲ್ವಾನರನ್ನು ಸಮಿತಿ ವತಿಯಿಂದ ಗುರುತಿಸಲಾಯಿತು. ಅಖಾಡದ ಎರಡು ಬದಿಯಲ್ಲಿ ಬೇಲಿ ನಿರ್ಮಿಸಿ, ಒಂದೊAದೆ ಹೋರಿಗಳನ್ನು ಓಡಿಸುವ ಮೂಲಕ ಸಮಿತಿಯವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...