ರಾಜ್ಯಾದ್ಯಂತ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 2021-22 ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 3,522 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿ ಸರ್ಕಾರ ಅನುಮೋದನೆ ನೀಡಿದೆ.
ಹೊಸ ನೇಮಕದ ಬದಲು ಈ ಹಿಂದೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಅರ್ಜಿ ಪಡೆದು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಪರಿಶೀಲಿಸಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
1,3,5 ನೇ ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿನ ಕಾರ್ಯಭಾರಕ್ಕೆ ಅನುಗುಣವಾಗಿ ಉಪನ್ಯಾಸಕರ ನೇಮಕ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ.
ಕಳೆದ ವರ್ಷ ತೆರವಾಗಿದ್ದ ಒಟ್ಟು 2,832 ಉಪನ್ಯಾಸಕ ಹುದ್ದೆಗಳ ಪೈಕಿ 1,835 ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗಿತ್ತು.ಆದರೆ, ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಗೊಂಡಿದೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು. ಸರ್ಕಾರವು ಎಂಟು ತಿಂಗಳ ಅವಧಿಗೆ 3,522 ಅತಿಥಿ ಉಪನ್ಯಾಸಕರ ನೇಮಕಕ್ಕೆ ಒಪ್ಪಿಗೆ ಸೂಚಿಸಿದೆ.
ಅತಿಥಿ ಉಪನ್ಯಾಸಕರ ನೇಮಕಾತಿ
Date: