ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಇಂಧನ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನಗಳ ಬೆಳವಣಿಗೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಇಂಧನ ಕ್ಷೇತ್ರದಲ್ಲಿನ ಉದ್ಯಮಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಪವರ್ ಕ್ವಾಲಿಟಿ ಉತ್ಪನ್ನಗಳ ತಯಾರಿಕ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇಂಧನ ಕ್ಷೇತ್ರದ ಸವಾಲು ಎದುರಿಸಿ, ಒಂದು ದೇಶ ಒಂದು ಗ್ರಿಡ್ ಎಂಬ ಪ್ರಧಾನಿ ಆಶಯ ಸಾಕಾರ ಮಾಡಬೇಕಿದೆ.
ಕೆಲವು ವರ್ಷಗಳ ಹಿಂದೆ ಗ್ರಿಡ್ ವ್ಯವಸ್ಥೆ ಸರಿಯಿಲ್ಲದೆ, ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ವಿದ್ಯುತ್ ಹರಿಸುವುದು ಕಷ್ಟವಾಗಿತ್ತು. ಆದರೆ, ಈಗ ಪ್ರಧಾನಿಯವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪವರ್ ಬಳಕೆ ಮಾಡುವ ಕುರಿತಾದ ದೂರದೃಷ್ಟಿ ಹೊಂದಿದ್ದು, ಇದಕ್ಕೆ ಪೂರಕ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.