ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರೆದಿದ್ದು, ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ ಬಳಿಕ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮಳೆಯ ಹೆಚ್ಚಾಗಿದೆ. ಮಳೆಹಾನಿ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಮಳೆಹಾನಿ ಕುರಿತು ಮಾಹಿತಿ ಕೊಟ್ಟ ನಂತರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದೆ. ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈ ಮಾತನಾಡಲು ಆಗಲ್ಲ. ತನಿಖೆ ನಂತರ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ.