Saturday, November 23, 2024
Saturday, November 23, 2024

ಕುಷ್ಠದ ಸೋಂಕನ್ನ ತೊಲಗಿಸುವಲ್ಲಿ ಶ್ರಮ ಪಡಬೇಕು- ಅನಿರುಧ್ ಶ್ರವಣ್

Date:

ಆಶಾ ಕಾರ್ಯಕರ್ತೆಯರು ವ್ಯಾಲೆಂಟರಿಗಳು ತಂಡ ತಂಡಗಳಾಗಿ ಮನೆ-ಮನೆ ಭೇಟಿ ನೀಡುವ ಮೂಲಕ ಕುಷ್ಠರೋಗ ಶಂಕಿತ ಪ್ರಕರಣಗಳನ್ನು ಪತ್ತೆಹಚ್ಚಿ ಹಾಗೂ ದೃಢಪಟ್ಟ ಪ್ರಕರಣಗಳನ್ನು ಚಿಕಿತ್ಸೆಗೆ ಒಳಪಡಿಸುವುದರ ಮೂಲಕ ಸಮಾಜದಲ್ಲಿ ಸೋಂಕನ್ನು ನಿರ್ಮೂಲನೆ ಮಾಡುವುದಕ್ಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಹೇಳಿದರು.
ಶುಕ್ರವಾರದಂದು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜಯನಗರ ಜಿಲ್ಲೆಯಾದ್ಯಂತ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನವು ಸೆ.12ರಿಂದ ಸೆ.29ರವರೆಗೆ ನಡೆಯಲಿದ್ದು, ಎಲ್ಲಾ ತಾಲೂಕು ಅಧಿಕಾರಿಗಳ ಜೊತೆಗೆ ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬೇಕು ಎಂದರು.

ವಿಜಯನಗರ ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ, ಶಾಲಾ,ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಮಿಕರಿಗೆ ಕುಷ್ಠರೋಗ ತಪಾಸಣೆ ಮಾಡಲು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ವಿಜಯನಗರ ಜಿಲ್ಲೆಯ ಎಲ್ಲಾ ಗ್ರಾಮ, ಪಟ್ಟಣಗಳಲ್ಲಿ ಕುಷ್ಠ ರೋಗ ಪತ್ತೆಹಚ್ಚುವ ಆಂದೋಲನದ ಬಗ್ಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಯ ಆಡಳಿತದ ಮುಖಾಂತರ ಡಂಗೂರು ಸಾರಿಸುವುದು, ಕಸ ವಿಲೇವಾರಿ ವಾಹನಗಳಲ್ಲಿ ಮೈಕಿಂಗ್, ಜಿಂಗಲ್ಸ್ ಗಳ ಮೂಲಕ ಪ್ರಚಾರ ಮಾಡುವುದು ಸೇರಿದಂತೆ ಭಿತ್ತಿಚಿತ್ರಗಳನ್ನು ಗ್ರಾಮ ಪಂಚಾಯಿತಿ, ಕೃಷಿ ಪತ್ತಿನ ಸಹಕಾರ ಸಂಘ, ಇಂದಿರಾ ಕ್ಯಾಂಟಿನ್, ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸಾರ್ವಜನಿಕ ಸೇರುವ ಸ್ಥಳಗಳಲ್ಲಿ ಅಂಟಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿದರು.
ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳಾದ ಡಾ.ಭಾಸ್ಕರ್ ಅವರು ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಸದರಿ ಅಭಿಯಾನದಲ್ಲಿ 3 ಲಕ್ಷ ಮನೆಗಳಿಂದ 1504114 ಜನಸಂಖ್ಯೆಯನ್ನು ತಪಾಸಣೆ ಮಾಡಲು 1104 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ 220 ಮೇಲ್ವಿಚಾರಕರು ಹಾಗೂ 1990 ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡಂತೆ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಹೊಸದಾಗಿ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು 10 ಲಕ್ಷ ಜನಸಂಖ್ಯೆಗೆ ಒಂದಕ್ಕಿಂತ ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪತ್ತೆ ಹಚ್ಚಲು ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಾಸ್ಕರ್, ಆರ್.ಸಿ.ಹೆಚ್.ಒ ಡಾ.ಜಂಭಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಾಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್‍ನಾಯ್ಕ್ ಸೇರಿದಂತೆ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳು ಹಾಗೂ ಅಂತರ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...