ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಸರ್ಕಾರ ಅಬಕಾರಿ ತೆರಿಗೆ ಮತ್ತು ರಾಜ್ಯ ಸರ್ಕಾರ ಮಾರಾಟ ತೆರಿಗೆಯನ್ನು ಇಳಿಕೆ ಮಾಡಿರುವುದರಿಂದ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 100.63 ಮತ್ತು ಡೀಸೆಲ್ 85.03ಕ್ಕೆ ತಗ್ಗಲಿದೆ.
“ಅಡುಗೆ ಅನಿಲ ಸೇರಿ ಎಲ್ಲಾ ವಸ್ತುಗಳ ಬೆಲೆ ಇಳಿಸುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ. ಇದೇ 14ರಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು” ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನ ತೀರ್ಪಿಗೆ ಎಷ್ಟು ಬೆಲೆ ಇದೆ, ಸರ್ಕಾರಗಳು ಹೇಗೆ ಹೆದರುತ್ತವೆ ಎಂಬುದಕ್ಕೆ ಉಪಚುನಾವಣೆ ಫಲಿತಾಂಶದ ನಂತರ ಇಂಧನ ದರ ಇಳಿಕೆಯೇ ಸಾಕ್ಷಿ ಎಂದರು.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ರೂ.10 ಮತ್ತು 5ಕ್ಕೆ ಇಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ್ದರು.
ತಗ್ಗಿದ ಇಂಧನ ದರ : ಗ್ರಾಹಕರ ನಿಟ್ಟುಸಿರು
Date: