ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ.
ಶನಿವಾರ ದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಇನ್ನೂ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇದು ಈಗಾಗಲೇ ಒಂದು ಹಂತದ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಕಂಗಾಲಾಗಿದ್ದ ಜನರನ್ನು ಮತ್ತೆ ಆತಂಕಕ್ಕೆ ನೂಕಿದೆ.
ಒಡಿಶಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭುವನೇಶ್ವರ ಮತ್ತು ಕಟಕ್‌ನಲ್ಲಿ ವಿಪರೀತ ಮಳೆಯಾಗಲಿದೆ. ಮನೆಗಳಿಂದ ಹೊರಗೆ ಬರದಂತೆ ನಾಗರಿಕರಿಗೆ ಸೂಚಿಸಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿ ಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಆಂಧ್ರಪ್ರದೇಶ, ಪಶ್ಚಿಮ ಬಂಗಾಲ, ತೆಲಂಗಾಣ ಮತ್ತು ಗುಜರಾತ್‌ನಲ್ಲೂ ಇದೇ ಸ್ಥಿತಿಯಿದೆ. ಸೆ.14 ರವರೆಗೂ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದು ಚೇರಿ ಮತ್ತು ಕರೈಕಲ್‌ನಲ್ಲಿ ರವಿ ವಾರ ವರುಣ ಅಬ್ಬರಿಸಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಸೆ. 12ರಂದು ಭಾರೀ ಮಳೆ ಯಾಗಲಿದೆ ಎಂದು ಹವಾ ಮಾನ ಇಲಾಖೆ ಹೇಳಿದೆ. ದೆಹಲಿಯಲ್ಲಿ ಶನಿವಾರ ದಿಂದೀಚೆಗೆ ಅಲ್ಪ ಪ್ರಮಾಣ ದಲ್ಲಿ ಮಳೆಯಾಗಿದೆ. ಸೆ.17- 18ರಂದು ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ವೊಂದು ಸಕ್ರಿಯ ಗೊಳ್ಳುವ ಸಾಧ್ಯತೆ ಯಿದೆ ಎಂದೂ ಇಲಾಖೆ ತಿಳಿಸಿದೆ.