ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ವಿಷಯವನ್ನು ಕಬ್ಬಿಣದ ಕಡಲೆ ಎಂದು ಭಾವಿಸಬಾರದು. ರಸಾಯನಶಾಸ್ತç ವಿಷಯ ಕಲಿಯುವ ಸರಳ ಮಾರ್ಗಗಳಿದ್ದು, ಅದನ್ನು ಅನುಸರಿಸುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಡಾ. ಗೀತಾರಾಣ ಹೇಳಿದರು.
ರಾಜೇಂದ್ರ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ಇಂಟರಾಕ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಸಾಯನ ಶಾಸ್ತವನ್ನು ಮಕ್ಕಳು ಸರಳವಾಗಿ ಕಲಿಯುವುದು ಹೇಗೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಆರಂಭದಿಂದಲೇ ರಸಾಯನಶಾಸ್ತ ವಿಷಯ ಕಷ್ಟ ಎಂಬ ಆಲೋಚನೆ ಮೂಡಿರುತ್ತದೆ. ಇದರಿಂದ ಪೂರ್ಣ ಪ್ರಮಾಣದಲ್ಲಿ ಆಸಕ್ತಿ ವಹಿಸಿ ಕಲಿಯದೇ ಇರುವುದರಿಂದ ಕಷ್ಟವಾಗುತ್ತದೆ. ಅದರ ಬದಲಾಗಿ ಸರಳ ಸೂತ್ರ ಹಾಗೂ ಉದಾಹರಣೆಗಳ ಮೂಲಕ ವಿಷಯಗಳ ಕಲಿಕೆಯಲ್ಲಿ ತೊಡಗಬೇಕು. ಜ್ಞಾಪಕ ಶಕ್ತಿ ವೃದ್ಧಿಯಾಗಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯು ಶಿಕ್ಷಣ, ಆರೋಗ್ಯ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸುವ ದೃಷ್ಠಿಯಿಂದ ವಿಶೇಷ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದೇವೆ ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ವಿಷಯ ಆದರೂ ಕಷ್ಟ ಎಂದು ಭಾವಿಸಬಾರದು.
ನಿರಂತರ ಅಭ್ಯಾಸ ಹಾಗೂ ಜ್ಞಾಪಕ ಶಕ್ತಿ ವೃದ್ಧಿಸಿಕೊಳ್ಳುವ ಹವ್ಯಾಸ ರೂಢಿಸಿಕೊಳ್ಳಬೇಕು. ಉತ್ತಮ ಅಭ್ಯಾಸದಿಂದ ಉತ್ತಮ ಫಲಿತಾಂಶ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಹ್ಯಾದ್ರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆಡಳಿತಾಧಿಕಾರಿ ಟಿ.ಪಿ.ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರುಣ್ ದೀಕ್ಷಿತ್, ಮುಖ್ಯಶಿಕ್ಷಕ ಕುಮಾರಸ್ವಾಮಿ, ಸಲ್ಮಾ, ರಂಜಿತ, ಗಾನವಿ, ಶಾಲೆಯ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.