Monday, November 25, 2024
Monday, November 25, 2024

ವಿಶ್ವ ವಿಕಲಾಂಗರ ದಿನ ಇರಲಿ ಅವರತ್ತ ನಮ್ಮ ಗಮನ

Date:

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ಮೂಲಕ 1992 ರಲ್ಲಿ ಅಂಗವಿಕಲ ವ್ಯಕ್ತಿಗಳ ಅಂತರಾಷ್ಟ್ರೀಯ ದಿನದ ವಾರ್ಷಿಕ ಆಚರಣೆಯನ್ನು ಘೋಷಿಸಲಾಯಿತು.

ಈ ದಿನದ ಆಚರಣೆಯು ಅಂಗವೈಕಲ್ಯ ಸಮಸ್ಯೆಗಳ ತಿಳುವಳಿಕೆಯನ್ನು ಉತ್ತೇಜಿಸಲು ಮತ್ತು ವಿಕಲಾಂಗ ವ್ಯಕ್ತಿಗಳ ಘನತೆ, ಹಕ್ಕುಗಳು ಮತ್ತು ಯೋಗಕ್ಷೇಮಕ್ಕಾಗಿ ಬೆಂಬಲವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ.

ಅಂಗವಿಕಲರು ಕೂಡಾ ಮನುಷ್ಯರೇ. ಅವರಿಗೂ ಭಾವನೆಗಳಿವೆ. ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಪರಿಗಣಿಸುವ ಪರಿಪಾಠವೂ ಕೆಲವೆಡೆ ಕಾಣಿಸುತ್ತಿದೆ.

ಅಥವಾ ಕೆಲವೆಡೆ ಅವರಿಗೆ ಇನ್ನಿಲ್ಲದ ಅನುಕಂಪ ತೋರುವುದು ಇದೆ. ಇದು ತಪ್ಪು. ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷ ಣಿಕ, ಮಾಹಿತಿ ತಂತ್ರಜ್ಞಾನ, ಮನೊರಂಜನೆ ಮುಂತಾದ ಕ್ಷೇತ್ರದಲ್ಲಿ ಗುರುತಿಸಬಲ್ಲರು. ವಿಶೇಷವಾದ ಸಾಧನೆಯನ್ನು ಮಾಡಬಲ್ಲರು. ಸಮಾಜದಲ್ಲಿ ಅವರ ಮಹತ್ವ ಜನರಿಗೆ ಗೊತ್ತಾಗಬೇಕು ಎಂಬ ಉದ್ದೇಶದಿಂದಲೇ ವರ್ಷದ ಒಂದು ದಿನವನ್ನು ಅವರಿಗಾಗಿ ಮೀಸಲಾಗಿರಿಸಲಾಗಿದೆ.

ಅದುವೇ ಡಿಸೆಂಬರ್‌ 3. ಇದು ಜಗತ್ತಿನೆಲ್ಲೆಡೆ ವಿಶ್ವ ಅಂಗವಿಕಲ ದಿನವನ್ನಾಗಿ ಆಚರಿಸಲಾಗುತ್ತದೆ.

ಪ್ರತಿ ವರ್ಷ ಈ ದಿನವನ್ನು ವಿವಿಧ ಥೀಮ್‌ಗಳಡಿಯಲ್ಲಿ ಆಚರಿಸಲಾಗುತ್ತದೆ. ಅಂಗವಿಕಲರಿಗೂ ಸಮಾಜದ ಇತರ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳು ಸಿಗಬೇಕು‌. ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದೇ ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ಅಂಗವಿಕಲರ ಸ್ವಾವಲಂಬಿ ಬದುಕಿಗಾಗಿ ಹೊಸ ತಾಂತ್ರಿಕ ಆವಿಷ್ಕಾರಗಳು ನಡೆಯುತ್ತಲೇ ಇವೆ. ಪಾರ್ಶ್ವವಾಯು ಮತ್ತು ಬೆನ್ನುಹುರಿ ಸಮಸ್ಯೆಯಿಂದ ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡವರಿಗೆ ಕೇವಲ ಗಾಲಿಕುರ್ಚಿಗಳೇ ಆಶ್ರಯವಾಗಿತ್ತು. ಇದೀಗ ಅವುಗಳನ್ನು ವಾಕರ್‌ ರೀತಿಯಲ್ಲಿ ಬಳಕೆ ಮಾಡಿಕೊಂಡು ಎಲೆಕ್ಟ್ರಿಕಲ್‌ ಸ್ಟಿಮ್ಯೂಲೇಶನ್‌ ತಂತ್ರಜ್ಞಾನದ ಮೂಲಕ ಸುಲಭವಾಗಿ ನಡೆಯಬಹುದು. ಈ ಸಾಧನದ ಮೂಲಕ ನರಗಳಿಗೆ ಮತ್ತು ಕಾಲಿನ ಮೂಳೆಗಳಿಗೆ ಶಕ್ತಿ ತುಂಬಲಾಗುತ್ತದೆ. ಹೀಗೆ ವಿವಿಧ ಬಗೆಯ ಎಲೆಕ್ಟ್ರಾನಿಕ್ ಉತ್ಪನ್ನಗಳು ಅಂಗವಿಕಲರಿಗೆ ನೆರವಾಗುತ್ತಿವೆ. ಅಂಗವಿಕಲು ಎನ್ನುವುದಕ್ಕಿಂತ ವಿಕಲಚೇತನರು ಎಂದು ಅವರನ್ನು ಕರೆಯುವುದು ಸೂಕ್ತವೆನಿಸುತ್ತದೆ. ವಿಕಲಚೇತನರಿಗೆ ಅನುಕಂಪದ ಬದಲಾಗಿ ಅವಕಾಶಗಳನ್ನು ನೀಡಿದ್ದಲ್ಲಿ ಅವರು ಇನ್ನಷ್ಟು ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ.
ಎಲ್ಲಾ ವಿಕಲಚೇತನರು ಆತ್ಮ ವಿಶ್ವಾಸದಿಂದ ಎಲ್ಲಾ ನೋವು, ಅವಮಾನಗಳನ್ನು ಮೆಟ್ಟಿ ನಿಂತು ಸಮಾಜಕ್ಕೆ ಆದರ್ಶವಾಗಲಿ ಎಂದು ಹಾರೈಸೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...