Wednesday, November 27, 2024
Wednesday, November 27, 2024

Agricultural Fair ಮಾರ್ಚ್ 17 ರಿಂದ 20 ವರೆಗೆ ಶಿವಪ್ಪ ನಾಯಕ ಕೃಷಿ & ತೋಟಗಾರಿಕಾ ವಿವಿ ಕೃಷಿಮೇಳ-ಡಾ.ಆರ್.ಸಿ.ಜಗದೀಶ

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಮಾರ್ಚ್ 17 ರಿಂದ 20 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2023ರನ್ನು ‘ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ’ ಎಂಬ ಧ್ಯೇಯದೊಂದಿಗೆ ನವುಲೆ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ|| ಆರ್.ಸಿ.ಜಗದೀಶ್ ಅವರು ಹೇಳಿದರು.

Agricultural Fair  ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಮಾರ್ಚ್ 17ರಂದು ತಾಂತ್ರಿಕ ಸಮಾವೇಶದಲ್ಲಿ ಅಡಿಕೆ ಬೇಸಾಯ ಪದ್ಧತಿಗಳು, ಅಡಿಕೆ ಬೆಳೆಯಲ್ಲಿ ಸಮಗ್ರ ಬೆಳೆ ಸಂರಕ್ಷಣೆ, ಬಹು ಬೆಳೆ ಪದ್ಧತಿ, ಮಾರುಕಟ್ಟೆ ಅವಕಾಶಗಳು ಮತ್ತು ಮೌಲ್ಯವರ್ಧನೆ ವಿಷಯಗಳ ಕುರಿತು ಹಾಗೂ ತೋಟಗಾರಿಕಾ ಇಲಾಖೆಯ ಯೋಜನೆಗಳ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದರು.

Agricultural Fair  ಮಾರ್ಚ್ 18ರಂದು ನಡೆಯಲಿರುವ ಸಮಾವೇಶದಲ್ಲಿ ಗೋಡಂಬಿ ಬೆಳೆಯ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಸಾಂಬಾರು ಬೆಳೆಗಳಲ್ಲಿ ಮೌಲ್ಯವರ್ಧನೆ, ಹಲಸು, ಬಾಳೆ ಹಾಗೂ ಅಡಿಕೆಯಲ್ಲಿ ಕೊಯ್ಲೋತ್ತರ ತಂತ್ರಜ್ಞಾನ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಜೇನು ಕೃಷಿ ಮತ್ತು ಮೌಲ್ಯವರ್ಧನೆ, ತೋಟಗಾರಿಕೆ ನರ್ಸರಿ ಮತ್ತು ಮೌಲ್ಯವರ್ಧನೆ, ಕೃಷಿ ಇಲಾಖೆಯ ಕಾರ್ಯಕ್ರಮಗಳ ಕಿರುಪರಿಚಯದ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ಏರ್ಪಡಿಸಲಾಗಿದೆ ಎಂದರು.
ಮಾರ್ಚ್ 19ರಂದು ಸಿರಿಧಾನ್ಯಗಳು ಆರೋಗ್ಯ ಮತ್ತು ಭವಿಷ್ಯದ ಬೆಳೆ, ಸಮಗ್ರ ಕೃಷಿ ಪದ್ಧತಿ, ಸುಸ್ಥಿರ ಆದಾಯಕ್ಕಾಗಿ ಸಮಗ್ರ ಕೃಷಿ ಪದ್ಧತಿಗಳು, ಸಿರಿಧಾನ್ಯಗಳ ಸಂರಕ್ಷಣೆ ಹಾಗೂ ಮೌಲ್ಯವರ್ಧನೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪಾತ್ರ ಮತ್ತು ಸಿರಿಧಾನ್ಯಗಳ ವೈವಿಧ್ಯತೆ ಮತ್ತು ಮಾರುಕಟ್ಟೆ ಅವಕಾಶಗಳು ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದರು.

ಕೃಷಿ ಮತ್ತು ತೋಟಗಾರಿಕಾ ಮೇಳದ ವಿಶೇಷತೆಗಳು : ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ-ಹೈಡ್ರೋಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣ ಕೆ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ಧತಿಗಳು, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಹವಾಮಾನ ಆಧಾರಿತ ಕೃಷಿ, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಶ್ರೇಷ್ಟ ಕೃಷಿಕರು ಮತ್ತು ಕೃಷಿ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ, ರೈತರ ಯಶೋಗಾಥೆ ಮತ್ತು ಕೃಷಿ ತಜ್ಞರೊಂದಿಗೆ ಸಂವಾದ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ದೊರೆಯಲಿವೆ.

ಈ ಮೇಳದಲ್ಲಿ ವಿಶೇಷವಾಗಿ ವಿಶ್ವಸಂಸ್ಥೆಯು ಭಾರತ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಿಕೊಂಡು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023 ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಸುಸ್ಥಿರ ಉತ್ಪಾದನೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆಹಾರ ಭದ್ರತೆ ಮತ್ತು ಪೋಷಣೆಗೆ ಸಿರಿಧಾನ್ಯಗಳ ಕೊಡುಗೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ರೈತರ ಆದಾಯ ದ್ವಿಗುಣ : ರೈತರ ಆದಾಯ ದ್ವಿಗುಣಗೊಳಿಸುವುದು ಭಾರತ ಸರ್ಕಾರದ ಕನಸಿನ ಯೋಜನೆಗಳ ಪೈಕಿ ಪ್ರಮುಖವಾದದ್ದಾಗಿದೆ. ಯೋಜನೆಗೆ ಸಂಬಂಧಿಸಿದ ರೂಪರೇಷೆಗಳು ಸುಲಭ ಆದರೆ ಅದನ್ನು ಸಾಧಿಸಲು ಇರುವ ಮಾರ್ಗ ಬಹಳ ಸವಾಲಿನದ್ದಾಗಿದೆ ಎಂದ ಅವರು, ಇದಕ್ಕಾಗಿ ಬೆಳೆ ಸುಧಾರಣೆ, ಜಾನುವಾರು ಉತ್ಪಾದಕತೆ, ಸಂಪನ್ಮೂಲ ಬಳಕೆಯಲ್ಲಿ ದಕ್ಷತೆ, ಉತ್ಪಾದನಾ ವೆಚ್ಚದಲ್ಲಿ ಉಳಿತಾಯ, ಬೆಳೆಯ ತೀವ್ರತೆಯನ್ನು ಹೆಚ್ಚಿಸುವುದು, ವಾಣಿಜ್ಯ ಬೆಳೆಗಳ ಕಡೆಗೆ ವೈವಿಧ್ಯಗೊಳಿಸುವುದು, ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸುವುದು ಮತ್ತು ರೈತರ ಬೆಳೆಗಳಿಗೆ ನೈಜ ಬೆಲೆಯನ್ನು ನೀಡುವತ್ತ ಗಮನ ಕೇಂದ್ರೀಕರಿಸುವ ಅಗತ್ಯವಿದೆ.

ರೈತರ ಆದಾಯ ದ್ವಿಗುಣಗೊಳಿಸುವುದರಲ್ಲಿ ಬಹುದೊಡ್ಡ ಸವಾಲು ಇರುವುದು ಕೊಯ್ಲು ನಂತರದ ಪ್ರಕ್ರಿಯೆ, ಆದ್ದರಿಂದ ಆಹಾರೋತ್ಪನ್ನಗಳ ಕೊಯ್ಲು ನಂತರದ ಪ್ರಕ್ರಿಯೆಗಳನ್ನು ಮತ್ತಷ್ಟು ಪರಿಣಾಮಕಾರಿಯನ್ನಾಗಿಸುವುದರತ್ತ ಹೆಚ್ಚಿನ ಗಮನ ಹರಿಸಬೇಕಿದ್ದು, ಕೊಯ್ಲು ನಂತರ-ಒಟ್ಟುಗೂಡಿಸುವಿಕೆ, ಸಂಸ್ಕರಣೆ, ಬ್ರ‍್ಯಾಂಡಿಂಗ್, ಮಾರ್ಕೆಟಿಂಗ್ ಮತ್ತು ರಫ್ತು ವಿಭಾಗಗಳೂ ಕೂಡ ರೈತರ ಆದಾಯವನ್ನು ದ್ವಿಗುಣಗೊಳಿಸುವುದಕ್ಕೆ ಪ್ರಮುಖ ಅಂಶವಾಗಿರಲಿವೆ ಎಂದವರು ತಿಳಿಸಿದರು.

ಈ ಕೃಷಿ ಮೇಳವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆಗೈದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ವಿವಿಧ ನವೀನ ತಾಂತ್ರಿಕತೆಗಳು ಮತ್ತು ವಿವಿಧ ಬೆಳೆಗಳ ಹೊಸ ತಳಿಗಳನ್ನು ಮತ್ತು ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಹಾಗೂ ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ವಿವಿ.ಯ ವಿಸ್ತರಣಾ ನಿರ್ದೇಶಕ ಡಾ|| ಹೇಮ್ಲಾನಾಯ್ಕ್, ಮೃತ್ಯುಂಜಯ ಸಿ.ವಾಲಿ, ಡೀನ್ ಡಾ|| ದುಶ್ಯಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related