Aam Aadmi Party Chikmagalur ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಕಾರ್ಯವನ್ನು ಸರಿಯಾಗಿ ನಿಭಾಯಿಸದೇ ಕೆಲವು ಮಂದಿಗೆ ಮಾತ್ರ ಅವಕಾಶ ಮಾಡಿಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಆಮ್‌ಆದ್ಮಿ ಪಕ್ಷದ ಅಲ್ಪ ಸಂಖ್ಯಾತ ಸಮಿತಿ ಅಧ್ಯಕ್ಷ ಸೈಯದ್ ಜಮೀಲ್ ಅಹಮ್ಮದ್ ಅವರು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಎಎಪಿ ಪಕ್ಷದ ಜಿಲ್ಲಾ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಕಚೇರಿಗೆ ಪರವಾನಗಿ ಕೋರಲು ತೆರಳಿದ ಸಂದರ್ಭದಲ್ಲಿ ಸಿಬ್ಬಂದಿಗಳ ಅನುಪಸ್ಥಿತಿ ಕಾರಣದಿಂದ ಜಿಲ್ಲಾ ಪ್ರವಾಸ ಕೈಬಿಡುವಂತಾಯಿತು ಎಂದು ದೂರಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 5 ಚುನಾವಣಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿದ್ದಾರೆ. ಇವರ ಪರವಾಗಿ ಪ್ರಚಾರ ಮಾಡಲು ಅನುಕೂಲವಾಗಿರುತ್ತದೆ. ಆದರೆ ಜಿಲ್ಲಾಧಿಕಾರಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವ ಹಿಸದೇ ಕೆಲವೇ ಜನರಿಗೆ ಮಾತ್ರ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ದೂರಿದ್ದಾರೆ.
ಈ ಹಿಂದೆ ಸ್ಥಳೀಯ ಸಂಸ್ಥೆಯ ಚುನಾವಣಾ ವೇಳೆಯಲ್ಲಿಯೂ ತಾಂತ್ರಿಕ ಕಾರಣಗಳನ್ನು ಸರಿಯಾಗಿ ನಿರ್ವ ಹಿಸದೇ ಗೆಲ್ಲುವ ಅಭ್ಯರ್ಥಿಗಳು ಸೋಲುವಂತಾಯಿತು. ಬಿಜೆಪಿ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಯಾವುದೆಲ್ಲಾ ಸೌಕರ್ಯಗಳು ಬೇಕಿದೆಯೋ ಅವುಗಳನ್ನು ಮಾಡುಕೊಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Aam Aadmi Party Chikmagalur ಆದ್ದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ನ್ಯಾಯಯುಕ್ತ ಚುನಾವಣೆ ನಡೆಸಲು ಅನುಕೂಲ ಮಾಡಿಕೊಡಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಇಮೇಲ್ ಮುಖಾಂತರ ದೂರು ಸಲ್ಲಿಸಲಾಗಿದೆ ಎಂದಿದ್ದಾರೆ.