CM Siddaramaiah ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ.
ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ತಮ್ಮನ್ನು ಗೆಲ್ಲಿಸಿದ ವರುಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿ ಅವರು ಮಾತಾಡಿದರು.
ಇದೇ ನನ್ನ ಕೊನೆಯ ಚುನಾವಣೆ ಎಂದೂ ಸಿದ್ದರಾಮಯ್ಯ ನುಡಿದಿದ್ದಾರೆ.
CM Siddaramaiah ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ
ಎಂದು ಹೇಳಿದರು.
ಸಮಾರಂಭಕ್ಕೆ ಮುನ್ನ ಜನಭರಿತ ರೋಡ್ ಶೋ ನಡೆಸಿ ವರುಣಾದ ಮತದಾರರಿಗೆ ಕೈಮುಗಿದು ಕೃತಜ್ಞತೆ ಅರ್ಪಿಸಿದರು.