Tuesday, November 26, 2024
Tuesday, November 26, 2024

Malenadu Vidyasamste ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು-ಶಾಸಕ ಭೋಜೇಗೌಡ

Date:

Malenadu Vidyasamste ಪ್ರತಿಭೆ ಎಂಬುದು ಮಕ್ಕಳಲ್ಲಿಯೇ ಅಡಗಿರುತ್ತದೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಹಾಗೂ ಶಾಲಾ ಶಿಕ್ಷಕರು ಮಾಡಿದರೆ ಉನ್ನತ ಸ್ಥಾನಮಾನ ಗಳಿಸಿ ಸಮಾ ಜದಲ್ಲಿ ಇತರರಿಗೆ ಮಾದರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಹೇಳಿದರು.

ಚಿಕ್ಕಮಗಳೂರು ನಗರದ ಮಲೆನಾಡು ವಿದ್ಯಾಸಂಸ್ಥೆ ಹಾಗೂ ಶ್ರೀಮತಿ ಸುಂದರಮ್ಮ ಶಂಕರಮೂರ್ತಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಾರಂಭವನ್ನು ಕಾಲೇಜು ಸಭಾಂಗಣದಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ವಿಭಿನ್ನ ರೀತಿಯ ಪ್ರತಿಭೆಗಳನ್ನು ಮಕ್ಕಳು ಹೊಂದಿರುತ್ತಾರೆ. ಕೆಲವರಿಗೆ ಅವಕಾಶ ವಂಚಿತರಾಗಿ ಪ್ರತಿಭೆ ಹೊರಹೊಮ್ಮಿಸಲು ಸಾಧ್ಯವಾಗದಿರಬಹುದು. ಆದರೆ ಸಿಕ್ಕಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಪ್ರತಿಭೆ ಅನಾವರಣಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದರು.

ನಮ್ಮ ಪೂರ್ವಜರು ಅಂದಿನ ಸಮಯದಲ್ಲಿ ಮೊಕ್ಕಾಲು, ಮುಕ್ಕಾಲು ವಿದ್ಯೆಯಿಂದಲೇ ಮಕ್ಕಳನ್ನು ಪೋಷಿಸಿ ವಿದ್ಯಾವಂತರನ್ನಾಗಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿವೆ. ಅವುಗಳನ್ನು ಸದುಪಯೋ ಗಪಡಿಸಿಕೊಂಡು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

Malenadu Vidyasamste ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಇಲ್ಲವಾದಲ್ಲಿ ಉತ್ತಮ ಸಮಾಜ ಕಟ್ಟಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಮಲೆನಾಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧಕೇತರ ವೃಂದ ಕಳೆದ ಹಲವಾರು ವರ್ಷಗಳಿಂದ ಗುಣಮಟ್ಟದ ವಿದ್ಯಾಭ್ಯಾಸ ನೀಡಿ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಮಾದರಿಯನ್ನಾಗಿ ಮಾಡುತ್ತಿದೆ ಎಂದು ಹೇಳಿದರು.
ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಚಂದ್ರಯಾನದ ಯಶಸ್ವಿ ವಿಶ್ವವೇ ಭಾರತದತ್ತ ಮುಖ ಮಾಡಿದೆ. ಇದನ್ನು ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥೀಗಳು ಇಂತಹ ವಿಷಯಗಳಲ್ಲಿ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಪಿಯು ಕಾಲೇಜಿನ ಪ್ರಾಚಾರ್ಯರೆ ಎಂ.ಬಿ.ಜಯಶ್ರೀ ಮಾತನಾಡಿ 1984ರಲ್ಲಿ 23 ವಿದ್ಯಾರ್ಥಿಗಳಿಂದ ಪ್ರಾರಂಭವಾದ ವಿದ್ಯಾಸಂಸ್ಥೆ ಇದೀಗ ನೂರಾರು ವಿದ್ಯಾರ್ಥಿಗಳನ್ನು ಒಳಗೊಂಡು ಯಶಸ್ವಿಯಾಗಿ ಮುನ್ನಡೆ ಯುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದಂತಹ ಅನೇಕ ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹೆಸರು ಗಳಿಸಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ವಹಿಸಿದ್ದರು. ಇದೇ ವೇಳೆ 2022-23ನೇ ಸಾಲಿನಲ್ಲಿ ಪಿಯು ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಳಿಸಿದ ಸುಮಾರು 60 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯತು.

ಈ ಸಂದರ್ಭದಲ್ಲಿ ಮಲೆನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ರಾಧಾಸುಂದ್ರೇಶ್, ಸಹ ಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್, ವ್ಯವಸ್ಥಾಪಕಿ ಲಕ್ಷ್ಮೀ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲೆಯ ಉಪನ್ಯಾಸ ಕರಾದ ಹೆಚ್.ಎನ್.ಸುಭಾಶ್ ನಿರೂಪಿಸಿದರು. ಭವ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ತನ್ವಿತ ಸಂಗಡಿಗರು ಪ್ರಾರ್ಥಿಸಿ ದರು. ಉಪನ್ಯಾಸಕಿ ಅನಿತ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...