Monday, November 25, 2024
Monday, November 25, 2024

Government Of Karnataka ನೆಮ್ಮದಿಯ ಬದುಕಿಗೆ ಆಹಾರಭದ್ರತೆ- ಅನ್ನಭಾಗ್ಯ

Date:

Government Of Karnataka ಅನ್ನ ದೇವರಿಗಿಂತ ಇನ್ನು ದೇವರು ಇಲ್ಲ ಎನ್ನುವ ಸರ್ವಜ್ಞರ ಕವಿವಾಣಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದರು.

ಹಸಿವು ಮುಕ್ತ ರಾಜ್ಯ ಮಾಡುವ ಗುರಿಯನ್ನಿಟ್ಟುಕೊಂಡು 2013 ರಲ್ಲಿ ರಾಜ್ಯದ ಚುಕ್ಕಾಣಿ ಹಿಡಿದಾಗ ಬಸವಣ್ಣನವರ ದಾಸೋಹ ಸಂಸ್ಕøತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ರೂಪಿಸಿದ ಯೋಜನೆ ಅನ್ನಭಾಗ್ಯ.

ಆಹಾರ ಭದ್ರತಾ ಯೋಜನೆಯಡಿ ಪ್ರತಿಯೊಬ್ಬ ಪಡಿತರದಾರನಿಗೆ ತಲಾ 10 ಕೆಜಿ ಆಹಾರಧಾನ್ಯ ಒದಗಿಸುವ ಯೋಜನೆ ಅನ್ನಭಾಗ್ಯ. ಪ್ರಸ್ತುತ ಹೆಚ್ಚುವರಿ ಅಕ್ಕಿಯ ಅಲಭ್ಯತೆಯ ಹೊರತಾಗಿಯೂ ಸರ್ಕಾರ ಕೈಚೆಲ್ಲಿ ಕುಳಿತಿಲ್ಲ. ಜನರಿಗೆ ನೀಡದ ವಾಗ್ದಾನದಂತೆ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಾಗಿ ತಲಾ ರೂ.170 ಕುಟುಂಬದ ಯಜಮಾನಿಯ ಖಾತೆಗೆ ಹಾಕುವ ಕ್ರಾಂತಿಕಾರಕ ಕ್ರಮಕ್ಕೆ ಸರ್ಕಾರ ಈಗಾಗಲೇ ಚಾಲನೆ ನೀಡಿದೆ.

ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಕುಟುಂಬ ಪಡಿತರ ಚೀಟಿಗಳು ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಈ ಯೋಜನೆ ಅನ್ವಯ.

Government Of Karnataka ಸರ್ಕಾರ ರಚನೆಯಾದ ನಂತರ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ 5 ಕೆಜಿ ಅಕ್ಕಿ ನೀಡಲು ಸಿದ್ದತೆಗಳನ್ನು ನಡೆಸಲಾಯಿತು. ಆದರೆ ರಾಜ್ಯದಲ್ಲಿ ಅಷ್ಟೊಂದು ಅಕ್ಕಿ ದಾಸ್ತಾನು ಇಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ಪ್ರಯತ್ನ ನಡೆಸಿತು. ಜೂನ್ 23 ರಂದು ಸ್ವತಃ ಮುಖ್ಯಮಂತ್ರಿ ಅವರೇ ದೆಹಲಿಗೆ ತೆರಳಿ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಷಾ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿ ಬಂದಿದ್ದರು.

ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲವೆಂದಾಗ, ಫಲಾನುಭವಿಗಳಿಗೆ ನಗದು ನೀಡುವುದರಿಂದ ಅನುಕೂಲವಾಗುತ್ತದೆ ಎಂದರಿತು ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

‘ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ’ ಎನ್ನುವ ಘೋಷವಾಕ್ಯದೊಂದಿಗೆ ಜುಲೈ 10 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಯಿತು.

ಆ.28 ಕ್ಕೆ ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಲಿದೆ. ಸರ್ಕಾರದ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಅತ್ಯುತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ಜನರಿಂದ ಲಭ್ಯವಾಗಿದೆ.

ನಿರೀಕ್ಷೆಗೆ ತಕ್ಕಂತೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ಐದು ಕೆಜಿ ಅಕ್ಕಿ ಬದಲು ತಲಾ ಸದಸ್ಯರಿಗೆ ರೂ.170 ಜಮೆ ಮಾಡುತ್ತಿದೆ. ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಒಟ್ಟು 3,08,429 ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‍ದಾರರಿದ್ದು ಈ ಕುಟುಂಬಗಳ 10,03.264 ಸದಸ್ಯರಿಗೆ ರೂ.17,46,73,810/- ಗಳನ್ನು ಜಮೆ ಮಾಡಲಾಗಿದೆ. ಹಾಗೂ ಆಗಸ್ಟ್ ಮಾಹೆಯಲ್ಲಿ ಒಟ್ಟು 3,25,156 ಕಾರ್ಡುಗಳ ಕುಟುಂಬದ 11,45,683 ಸದಸ್ಯರಿಗೆ ರೂ.18,49,56,430 ಜಮೆ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ದೂರುಗಳಿದ್ದರೆ ಉಚಿತ ಸಹಾಯವಾಣಿ ಸಂಖ್ಯೆ 1967 ಹಾಗೂ 1800 425 9339 ಕ್ಕೆ ಕರೆ ಮಾಡಬಹುದು. ಹಾಗೂ ನ್ಯಾಯಬೆಲೆ ಅಂಗಡಿಯ ವ್ಯಾಪ್ತಿಯಲ್ಲಿ ಅಧಿಕಾರಿಯೊಬ್ಬರ ಸಮ್ಮುಖದಲ್ಲಿ ನಿರ್ದಿಷ್ಟ ದಿನಾಂಕದಂದು ಅನ್ನಭಾಗ್ಯ ಅದಾಲತ್ ನಡೆಸಲಾಗುತ್ತದೆ ಎಂದು ಶಿವಮೊಗ್ಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉಪ ನಿರ್ದೇಶಕರಾದ -ಅವಿನ್ ಆರ್ ಅವರು ತಿಳಿಸಿದ್ದಾರೆ.

ಅನ್ನಭಾಗ್ಯದ ಫಲಾನುಭವಿಗಳ ಅನಿಸಿಕೆಗಳು ಹೀಗಿವೆ.

ಅನ್ನಭಾಗ್ಯ ಯೋಜನೆ ನಮ್ಮಂತಹ ಬಡವರಿಗೆ ವರದಾನವಾಗಿದೆ. ಅನೇಕರು ಏನೇನೋ ಟೀಕೆ ಮಾಡುತ್ತಿದ್ದಾರೆ. ಆದರೆ ಆ ಟೀಕೆಗಳಿಗೆ ಅರ್ಥವಿಲ್ಲ. ಮುಖ್ಯಮಂತ್ರಿಯವರು 5 ಕೆಜಿಅಕ್ಕಿ ಬದಲಾಗಿ ಹಣ ನೀಡುತ್ತಿರುವುದು ಸಹ ತುಂಬ ಉಪಯೋಗವಾಗಿದೆ. ಈ ಹಣದಿಂದ ಅಕ್ಕಿ ಅಥವಾ ಇತರೆ ದಿನಸಿ, ಆರೋಗ್ಯ ಇನ್ನಿತರೆ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದೇವೆ ಎಂದು ಮಂಜಣ್ಣ ಮಾಚೇನಹಳ್ಳಿ ಅವರು ಹೇಳಿದ್ದಾರೆ.

ನಾನು ಮತ್ತು ನನ್ನ ಪತಿ ಕೂಲಿ ಮಾಡುತ್ತಿದ್ದು, ಅದರಿಂದಲೇ ಮಕ್ಕಳ ಶಿಕ್ಷಣ ಹಾಗೂ ನಮ್ಮ ಕುಟುಂಬ ನಿರ್ವಹಣೆ ಮಾಡಬೇಕಿದೆ. ಹಸಿದವರಿಗೇ ಗೊತ್ತು ಅನ್ನದ ಬೆಲೆ. ಸರ್ಕಾರ ನೀಡುತ್ತಿರುವ ಅಕ್ಕಿಯಿಂದ ನಮ್ಮ ಜೀವನ ಸಾಗುತ್ತಿದೆ. ಈಗ ಅಕ್ಕಿ ಬದಲು ಹಣ ನೀಡುತ್ತಿರುವುದರಿಂದ ಇತರೆ ಅಗತ್ಯಗಳನ್ನು ಪೂರೈಸಿಕೊಳ್ಳುತ್ತಿದ್ದೇವೆ. ಸರ್ಕಾರಕ್ಕೆ ಧನ್ಯವಾದಗಳು ಎಂದು ರಾಮಕ್ಕ, ಸೋಗಾನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...