Tuesday, November 26, 2024
Tuesday, November 26, 2024

Actor Darshan Thoogudeepa ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ: ನಟ ದರ್ಶನ್ & ಮಾಧ್ಯಮ ಪ್ರಕರಣ ಸುಖಾಂತ್ಯ

Date:

Actor Darshan Thoogudeepa ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಸ್ಯಾಂಡಲ್ ವುಡ್ ನ ಖ್ಯಾತ ನಟ ದರ್ಶನ್ ತೂಗುದೀಪ ಟ್ವಿಟರ್ ಮೂಲಕ ಅವರು ಶುಭ ಕೋರಿದ್ದಾರೆ.

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನು ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕೆ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್‌ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ,

Actor Darshan Thoogudeepa ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ್ರ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ರಮ ಇರಲಿ, ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ, ಗೌರವವಿದೆ ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ವಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವಲ್ಲ. ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ, ಪ್ರೀತಿಯಿರಲಿ ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...