Sunday, November 24, 2024
Sunday, November 24, 2024

Lions International ಕಣ್ಣು & ದಂತಗಳನ್ನ ಸೂಕ್ತ ಸಮಯದಲ್ಲಿ ತಪಾಸಣೆ‌ ಮಾಡಿಸಿ

Date:

Lions International ಶರೀರದ ಅಮೂಲ್ಯ ಅಂಗವಾಗಿರುವ ನೇತ್ರ ಹಾಗೂ ದಂತ ತಪಾಸಣೆ ಯನ್ನು ತಜ್ಞ ವೈದ್ಯರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದು ಅತಿಮುಖ್ಯ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಜಿ.ರಮೇಶ್ ಹೇಳಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ಲಯನ್ಸ್ ಇಂಟರ್ ನ್ಯಾಷನಲ್, ಜಿಲ್ಲಾ ಲಯನ್ಸ್ ಸಂಸ್ಥೆ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಉಚಿತ ದಂತ ಮತ್ತು ನೇತ್ರ ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನೇತ್ರ ಮಾನವ ದೇಹದ ಅತ್ಯಂತ ಸೂಕ್ಷ್ಮವಾದ ಅಂಗವಾದರೆ, ದಂತ ಆಹಾರವನ್ನಾದರೂ ಜಗಿಯುವದ್ದು. ಇವುಗಳನ್ನು ಅತ್ಯಂತ ಜಾಗರೂಕತೆಯಿಂದ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕಾರಾ ಬಂಧಿಗಳಿಗೆ ಉಚಿತ ಶಿಬಿರ ಆಯೋಜಿಸಿದ್ದು ತಪಾಸಣೆ ವೇಳೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಮುಂದಿನ ಆರೋಗ್ಯ ಸಮಸ್ಯೆ ಬರದಂತೆ ತಡೆಗಟ್ಟಲು ಸಾಧ್ಯ ಎಂದರು.

ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾದರೆ ನಾವು ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಹೊಂದಲು ಸಾಧ್ಯ. ವಿಶ್ವವನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾ ಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಸೂಕ್ತ ಸಮಯಕ್ಕೆ ತಪಾಸಣೆ ನಡೆಸಿದರೆ ಮಾತ್ರ ಸಾಧ್ಯ ಎಂದು ಹೇಳಿದರು.

Lions International ಪ್ರತಿಯೊಬ್ಬರು ಪ್ರತ್ಯೇಕ ಬ್ರಷ್‌ನಲ್ಲಿ ಹಲ್ಲು ಉಜ್ಜುವು ಅಭ್ಯಾಸ ಇಟ್ಟುಕೊಳ್ಳಬೇಕು. ಯಾವುದೇ ಆಹಾರ ಪದಾ ರ್ಥ ಸೇವಿಸಿದ ಮೇಲೆ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಹಲ್ಲು ಉಜ್ಜುವಾಗ ವಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬೆಳಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ಎಂದು ಕಿವಿಮಾತು ಹೇಳಿ ದರು.
ಪ್ರಧಾನ ಕಾನೂನು ಅಭಿರಕ್ಷಕ ಬಿ.ನಟರಾಜ್ ಮಾತನಾಡಿ ಇಂದಿನ ಜೀವನ ಶೈಲಿ ಬದಲಾವಣೆಯಿಂದ ಜಂಕ್ ಪುಡ್‌ಗಳನ್ನು ಹೆಚ್ಚಾಗಿ ಸೇವಿಸುತ್ತಿರುವುದರಿಂದ ಹಲ್ಲುಗಳು ಬೇಗ ಹಾಳಾಗುತ್ತಿವೆ. ಇಂತಹ ಶಿಬಿರದ ಮೂ ಲಕ ಹಲ್ಲಿನ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಲಯನ್ಸ್ ಕ್ಲಬ್ ಕೈಹಾಕಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಾ|| ಜೆ.ಪಿ.ಕೃಷ್ಣೇಗೌಡ ಮಾತನಾಡಿ ಕಣ್ಣು ಹಾಗೂ ದಂತ ಸೇರಿದಂತೆ ಮಾನವ ಶರೀರದ ಪ್ರತಿಯೊಂದು ಅಂಗಾಂಗಗಳ ಬಗ್ಗೆ ಅತ್ಯಂತ ಕಾಳಜಿ ವಹಿಸಬೇಕು. ಸಮಯಕ್ಕೆ ಸರಿಯಾಗಿ ತಪಾಸಣೆ ನಡೆಸದೇ ಹೋದರೆ ಮುಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಗೆ ಎದುರಾಗುವ ಸಂಭವ ವಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾರಾಗೃಹ ಅಧೀಕ್ಷಕ ಎಸ್.ಎಸ್.ಮೇಟಿ ತಜ್ಞ ವೈದ್ಯ ರಿಂದ ದಂತ ಹಾಗೂ ನೇತ್ರ ತಪಾಸಣೆ ನಡೆಸಲು ಕಾರಾಬಂಧಿಗಳಿಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಇದನ್ನು ಅರಿ ತು ಲಯನ್ಸ್ ಕ್ಲಬ್ ಸಾರಥ್ಯದಲ್ಲಿ ಶಿಬಿರವನ್ನು ಏರ್ಪಡಿಸಲಾಗಿದೆ. ಇಂತಹ ಶಿಬಿರದಲ್ಲಿ ಕಾರಾಬಂಧಿಗಳು ಮುಕ್ತ ವಾಗಿ ಪಾಲ್ಗೊಳ್ಳುವ ಮೂಲಕ ಸಮಸ್ಯೆಗಳಿದ್ದರೆ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.

ಇದೇ ವೇಳೆ ಕಾರಾಬಂಧಿಗಳಿಗೆ ತಜ್ಞ ವೈದ್ಯರು ದಂತ ಹಾಗೂ ನೇತ್ರ ತಪಾಸಣೆ ನಡೆಸಿದರು. ಬಳಿಕ ವೈದ್ಯರುಗಳಿಗೆ ಲಯನ್ಸ್ ಕ್ಲಬ್‌ನಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪ ಕಾನೂನು ಅಭಿರಕ್ಷಕ ಸುನೀಲ್, ಲಯನ್ಸ್ ಸಂಸ್ಥೆ ಕಾರ್ಯದರ್ಶಿ ನಾರಾಯಣ ಸ್ವಾಮಿ, ಖಜಾಂಚಿ ಟಿ.ಇ.ಬಾಲಕೃಷ್ಣ, ವೈದ್ಯರುಗಳಾದ ಡಾ|| ಖಾದರ್, ಡಾ|| ಕೆ.ಸುಂದರಗೌಡ, ಡಾ|| ಮೇಘನ, ಡಾ|| ಹರೀಶ್ ಹಾಗೂ ಕಾರಾಗೃಹ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...