Income Tax Deparatment ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಶನಿವಾರ ನಡೆಸಿದ ದಾಳಿಯಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಹಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಮಾಜಿ ಸದಸ್ಯರೊಬ್ಬರ ಸಹೋದರನ ವಿಚಾರಣೆ ನಡೆಸಲಾಗಿದೆ.
ಇಡೀ ದಿನ ರಾಜಾಜಿನಗರದ ಕೇತಮಾರನಹಳ್ಳಿಯ ಅಪಾರ್ಟ್ಮೆಂಟ್ನ ಫ್ಲಾಟ್ವೊಂದರ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ 40 ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ. ಈ ಫ್ಲಾಟ್ ಬಿಲ್ಡರ್ ಸಂತೋಷ್ ಎಂಬುವವರಿಗೆ ಸೇರಿದ್ದು, ಎಂದು ತಿಳಿದುಬಂದಿದೆ.
ಸತತ 18 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು 3 ಟ್ರಂಕ್, 3 ಬ್ಯಾಗ್, 1 ಸೂಟ್ ಕೇಸ್ಗಳಲ್ಲಿ ಹಣ, ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ ಬಿಲ್ಡರ್ ಸಂತೋಷ್ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿದ್ದಾರೆ.
Income Tax Deparatment ಅಪಾರ್ಟ್ಮೆಂಟ್ನ 5ನೇ ಮಹಡಿಯ ಫ್ಲಾಟ್ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ಹಣ ವಿಧಾನ ಪರಿಷತ್ನ ಮಾಜಿ ಸದಸ್ಯರೊಬ್ಬರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದ್ದು, ಅವರ ಸಹೋದರನನ್ನು ಫ್ಲಾಟ್ಗೆ ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.