Thursday, November 28, 2024
Thursday, November 28, 2024

Little Elly School Shivamogga ಮಕ್ಕಳು ವಿದ್ಯಾಭ್ಯಾಸದ ಜೊತೆ ಕ್ರೀಡೆಗಳಲ್ಲೂ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಿ- ಡಾ.ಕೆ.ಬಿ.ಧನಂಜಯ

Date:

Little Elly School Shivamogga ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾಲ್ಗೊಳ್ಳುವಿಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ ಹೇಳಿದರು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಲಿಟಲ್ ಎಲಿ ಶಾಲೆಯ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಕಡೆಗೆ ಮಾತ್ರ ಒತ್ತಡ ಹಾಕದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಆಸಕ್ತಿ ಬೆಳೆಸಬೇಕು. ಕ್ರೀಡೆ, ಸಾಂಸ್ಕೃತಿಕ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಈಜುಪಟು ಆರ್ಶಿಕಾ ದೀಪಕ್ ಹೆಗಡೆ ಮಾತನಾಡಿ, ಮಕ್ಕಳು ಎಲ್ಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಮಕ್ಕಳ ದೈಹಿಕ ಸಾಮಾರ್ಥ್ಯ ಹೆಚ್ಚುವ ಜತೆಯಲ್ಲಿ ಮನೋಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು.

ಬಾಲ್ಯದಿಂದಲೇ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಬೇಕು. ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೆಪಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಹೆಚ್ಚು ಉಪಯುಕ್ತ ಆಗುತ್ತದೆ ಎಂದರು.

ಲಿಟಲ್ ಎಲಿ ಶಾಲೆಯ ಅನಿಲ್ ಪಿ ಶೆಟ್ಟಿ ಮಾತನಾಡಿ, ಶಾಲೆಯ ವಿದ್ಯಾಭ್ಯಾಸದ ಜತೆಯಲ್ಲಿ ಮಕ್ಕಳಿಗೆ ವಿಶೇಷ ಕೌಶಲ್ಯ ವೃದ್ಧಿಸುವ ಅಂಶಗಳನ್ನು ಕಲಿಸಲಾಗುತ್ತದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಉತ್ತಮ ಶಿಕ್ಷಣ ಹಾಗೂ ಶಿಸ್ತು, ನಾಯಕತ್ವ ಕಲಿಕೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

Little Elly School Shivamogga ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಬಿಂದು ಅನಿಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahyadri Science College ಡಿ.05 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ : ಯುವ ಕೃತಿ ಮತ್ತು ವಿಜ್ಞಾನ ಮೇಳ

Sahyadri Science College ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ...

Sahyadri Kannada Siri Balaga ಸ್ಟೈಲ್ ಡಾನ್ಸ್ ಕ್ರೀವ್ ಸಂಸ್ಥಾಪಕ ಶಶಿಕುಮಾರ್ ಪುನೀತ ರತ್ನ ಪ್ರಶಸ್ತಿ

Shivamogga Sahyadri Kannada Siri Balaga ಶಿವಮೊಗ್ಗ ಜಿಲ್ಲಾ ಸಹ್ಯಾದ್ರಿ...