Wednesday, November 27, 2024
Wednesday, November 27, 2024

Siddaramaiah ದೃಶ್ಯಮಾಧ್ಯಮಗಳಲ್ಲಿ ಬಂದಿರುವ ಬಾಬಾಬುಡನ್ ಗಿರಿ ಗೋರಿ ಧ್ವಂಸ ಪ್ರಕರಣ ರೀ ಓಪನ್ ಪ್ರಕರಣ ಸುಳ್ಳು ಸುದ್ದಿ- ಸಿದ್ಧರಾಮಯ್ಯ

Date:

Siddaramaiah ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದೆ. ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು.
2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ತಿಳಿಸಿದ್ದಾರೆ.

Siddaramaiah ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು.
ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Shivamogga-Bhadravathi Urban Development Authority ಊರುಗಡೂರು ನಿವೇಶನ ಹಂಚಿಕೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿ.5 ಅಂತಿಮ ದಿನಾಂಕ

Shivamogga-Bhadravathi Urban Development Authority ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ...

Shivamogga City Corporation ಒಂದು ತಿಂಗಳಲ್ಲಿ ಏಕರೀತಿಯ ಕರವಸೂಲಾತಿ ಹೊಸ ಕಾಯ್ದೆ ಜಾರಿ- ಸಚಿವ ರಹೀಂ ಖಾನ್

Shivamogga City Corporation ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ...