Saturday, November 23, 2024
Saturday, November 23, 2024

CM Siddaramaiah  ಸಮಾನತೆ ,ಪ್ರೀತಿಯಿಂದ ಬಾಳ ಬೇಕೆನ್ನುವುದು ಶ್ರೀರಾಮನ ಆಶಯ- ಸಿದ್ಧರಾಮಯ್ಯ

Date:

CM Siddaramaiah  ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ಹೇಳಿದರು.

ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ.
ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ತಿಳಿಸಿ ದರು.

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ. ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದು ಹೇಳಿದರು.

CM Siddaramaiah  ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ
ಜೈ ಶ್ರೀರಾಮ್ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...