Snehal Sudhakar Lokhande ಫೆ.27 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 1 ರಿoದ 19 ವರ್ಷದ ಎಲ್ಲ ಮಕ್ಕಳು ಜಂತು ಹುಳು ನಿವಾರಣಾ ಮಾತ್ರೆ ಆಲ್ಬೆಂಡಜಾಲ್ನ್ನು ಉಚಿತವಾಗಿ ಪಡೆದುಕೊಳ್ಳಬೇಕು ಎಂದು ಜಿ.ಪಂ ಸಿಇಓ ತಿಳಿಸಿದರು.
2023-24 ನೇ ಸಾಲಿನಲ್ಲಿ ಜಿಲ್ಲೆಯ ಒಟ್ಟು 4,52, 072 ಮಕ್ಕಳಿಗೆ ಆಲ್ಬೆಂಡಜಾಲ್ ನೀಡುವ ಗುರಿ ಹೊಂದಲಾಗಿದ್ದು, ಎಲ್ಲ ಅರ್ಹ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಹಾಗೂ ಶಿಕ್ಷಕರು ತಮ್ಮ ಮುಂದೆಯೇ ಮಕ್ಕಳು ಮಾತ್ರೆ ತೆಗೆದುಕೊಳ್ಳುವಂತೆ ನೋಡಬೇಕು.
ಜಂತುಹುಳುವಿನಿಂದ ಅಪೌಷ್ಟಿಕತೆ ಸೇರಿಂದತೆ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುವುದರಿಂದ ಮಕ್ಕಳಿಗೆ ಶುಚಿತ್ವದ ಬಗ್ಗೆ, ಕೈ ತೊಳೆಯುವ ಕ್ರಮದ ಬಗ್ಗೆ ಶಾಲೆಗಳಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಬೇಕು. ಶಿಕ್ಷಕರು ಜಂತು ಹುಳು ನಿವಾರಣಾ ಮಾತ್ರೆ ನೀಡುವ ಬಗ್ಗೆ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದರು.
ಆರ್ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಅಂಗನವಾಡಿ, ಶಾಲೆಗಳು, ಪದವಿಪೂರ್ವ ಕಾಲೇಜು, ಐಟಿಐ, ಟೆಕ್ನಿಕಲ್ ಕೋರ್ಸ್ ಕಾಲೇಜುಗಳು,ಪ್ರಥಮ ಬಿಎ, ಮೆಡಿಕಲ್, ಆಯುರ್ವೇದಿಕ್ ಕಾಲೇಜುಗಳಲ್ಲಿ 1 ರಿಂದ 19 ವರ್ಷದ ಮಕ್ಕಳಿಗೆ ಉಚಿತವಾಗಿ Snehal Sudhakar Lokhande ವಿತರಿಸಲಾಗುತ್ತದೆ. ಅಲ್ಲದೆ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಲ್ಲ ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು, ಐಎಂಎ, ಸಂಘ ಸಂಸ್ಥೆ ಪದಾಧಿಕಾರಿಗಳು, ಇತರೆ ಅಧಿಕಾರಿಗಳು ಹಾಜರಿದ್ದರು.
Snehal Sudhakar Lokhande ಜಂತುಹುಳುವಿನಿಂದ ಮಕ್ಕಳಲ್ಲಿ ಅಪೌಷ್ಠಿಕತೆಯಂತಹ ಆರೋಗ್ಯ ತೊಂದರೆ- ಸ್ನೇಹಿಲ್ ಸುಧಾಕರ್ ಲೋಖಂಡೆ
Date: