Wednesday, November 27, 2024
Wednesday, November 27, 2024

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗಿರುವ ತಂಬಾಕು ತಡೆ ಕಾಯಿದೆ ತಿದ್ದುಪಡಿ ಕೈ ಬಿಡಲು ಮನವಿ ಸಲ್ಲಿಕೆ

Date:

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗುವ ತಂಬಾಕು ತಡೆ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಯನ್ನು ಕೈಬಿಡಬೇಕೆಂದು ಬೀದಿಬದಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆಯಬೇಕೆಂದು ಶಾಸಕರಾದ ಶಾರದಾ ಪೂರ್ಯನಾಯ್ಕ್ ಮತ್ತು ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿರುವ ಸಂಘ, ಈಗಿರುವ ಕಾಯಿದೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ 200 ರೂ. ದಂಡ ವಿದಿಸಲಾಗುತ್ತದೆ. ರಾಜ್ಯ ಸರಕಾರ ಈಗ ಈ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದು ಜಾರಿಯಾದರೆ ದಂಡ ಶುಲ್ಕವನ್ನು ಒಂದು ಸಾವಿರ ರೂ.ಗೆ ಏರಿಸಲಾಗುತ್ತದೆ. ಇದರಿಂದ ರಾಜ್ಯದ ಲಕ್ಷಾಂತರ ಬೀದಿಬದಿ ಚಿಲ್ಲರೆ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೊಳಗಾಗುತ್ತಾರೆ ಆದ್ದರಿಂದ ಸರಕಾರ ಈ ಬಗ್ಗೆ ಮರುಚಿಂತನೆ ಮಾಡಬೇಕು. ಶಾಸಕರುಗಳು ನಮ್ಮ ಪರವಾಗಿ ಶಾಸನಸಭೆಯಲ್ಲಿ ವಾದಮಂಡಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
Street Vendors ಚಿಲ್ಲರೆ ವ್ಯಾಪಾರಿಗಳ ಸಂಘದ ಪರವಾಗಿ, ಅನಿಲ್, ಶಾಮಣ್ಣ, ಕುಮಾರ್, ಅಲಿ ,ಕಲೀಮ್, ಜೈನ್, ಸುಧೀರ್, ಶೇಖರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ

Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ...

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ...