Marathon running ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ, ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿ ಮಾರ್ಚ್ 10ರಂದು ಶಿವಮೊಗ್ಗ ನಗರದಲ್ಲಿ Karnataka Police Run 5K ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳ ಲಾಗಿತ್ತು.
ಮಿಥುನ್ ಕುಮಾರ್ ಜಿ. ಕೆ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.
ಮ್ಯಾರಥಾನ್ ಓಟವನ್ನು ಶಿವಮೊಗ್ಗದ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.
Marathon running ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದರ್ಶನ್ ಲಕ್ಕನವರ್, ಹುಬ್ಬಳ್ಳಿ, ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ, ದ್ವಿತೀಯ ಸ್ಥಾನವನ್ನು ನಾಗರಾಜ್ ದಿವಾತೆ ಹುಬ್ಬಳ್ಳಿ, ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿ, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹೆಚ್. ವಿ ಧೀಕ್ಷಾ ಶಿವಮೊಗ್ಗ,ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ಮತ್ತು ದ್ವಿತೀಯ ಸ್ಥಾನವನ್ನು ಸಾನಿಕ ಎಸ್, ಶಿವಮೊಗ್ಗ ಕ್ರೀಡಾ ಮತ್ತು ಯುವಜನ ಇಲಾಖೆ ಶಿವಮೊಗ್ಗದ ವಿದ್ಯಾರ್ಥಿನಿ ರವರು ಪಡೆದಿರುತ್ತಾರೆ. ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪ್ರಥಮ ಸ್ಥಾನ ಪಡೆದ ವಿಜೇತರಿಗೆ ರೂ 10,000/- ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ಹಾಗೂ ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ರೂ 5,000/- ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರು. ಹಾಗೂ ಮ್ಯಾರಥಾನ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ನೀಡಲಾಯಿತು.