Wednesday, November 27, 2024
Wednesday, November 27, 2024

Yoga Day ಯೋಗ ನಮ್ಮ ದೈನಿಕ ಬದುಕಿನ ಅವಿಭಾಜ್ಯ ಅಂಗವಾಗಬೇಕು- ಶ್ರೀಸಾಯಿನಾಥಶ್ರೀ

Date:

Yoga Day ಯೋಗ ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು.

ಗುರುಪುರದ ಬಿಜಿಎಸ್ ಶಾಲಾ ಮತ್ತು ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಅವರು ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಇದು ನಮ್ಮ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದರು.

ಯೋಗ ಭಾರತದ ಪ್ರಾಚೀನ ಕಲೆ ಇದನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ, 2014ರಲ್ಲಿ ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಯೋಗದ ಬಗ್ಗೆ ಪ್ರಸ್ತಾಪಿಸಲಾಯಿತು. ಆ ಸಂದರ್ಭದಲ್ಲಿ 177 ರಾಷ್ಟ್ರಗಳು ಇದಕ್ಕೆ ಒಪ್ಪಿಗೆಯನ್ನ ಸೂಚಿಸಿದವು ಇದರ ಪರಿಣಾಮವಾಗಿ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ದಿನಮಾನಗಳಲ್ಲಿ ವಿದೇಶಿಯರು ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡುತ್ತಾರೆ. ದುರಂತವೆಂದರೆ ಭಾರತದಲ್ಲಿಯೇ ಯೋಗದ ಅಭ್ಯಾಸ ನಿರಂತರವಾಗಿ ನಡೆಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು ನಮ್ಮ ದೇಶದ ಮೂಲವಾಗಿರುವ ಯೋಗವನ್ನ ಪ್ರತಿನಿತ್ಯ ಅಭ್ಯಾಸ ಮಾಡುವ ಮೂಲಕ ಪ್ರತಿಯೊಬ್ಬರು ಆರೋಗ್ಯವಂತರಾಗಿ, ಸದಾ ಲವಲವಿಕೆಯಿಂದಿರಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಉತ್ತಮ ಎಂದು ಹೇಳಿದರು.

ಜ್ಞಾನದಲ್ಲಿ 18 ಪಾದಗಳಿದ್ದು ಅದರಲ್ಲಿ ನಾಲ್ಕು ಯೋಗಗಳು ಇರುತ್ತವೆ. ಜ್ಞಾನ ಯೋಗ, ರಾಜಯೋಗ, ಕರ್ಮ ಯೋಗ,ಭಕ್ತಿ ಯೋಗ ಎಂಬ ನಾಲ್ಕು ವಿಭಾಗಗಳಿದ್ದು ಈ ನಾಲ್ಕು ಭಾಗಗಳಲ್ಲಿ ನಾವು ಪ್ರತಿನಿತ್ಯ ಯೋಗ ಅಭ್ಯಾಸವನ್ನು ಮಾಡಬೇಕಾಗುತ್ತದೆ ಎಂದು ಹೇಳಿದರು.

Yoga Day ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್., ಉಪನ್ಯಾಸಕ ಸಂದೀಪ್ ಶೆಟ್ಟಿ ಸ್ವಾಗತಿಸಿ, ಹಿರಿಯ ಶಿಕ್ಷಕರಾದ ಮಾಲತೇಶ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರಿದ್ದರು.

ಬಾಕ್ಸ್ : ಕೇವಲ ಭಾರತವಲ್ಲದೆ ಇಡೀ ವಿಶ್ವದಲ್ಲಿ ಯೋಗಕ್ಕೆ ಆದ್ಯತೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಇದರ ರೂವಾರಿಯಾಗಿದ್ದು,ಈಗ ಭಾರತದ ಯೋಗ ವಿಶ್ವದ ತುಂಬಾ ಹರಡಿದೆ ಎಂದರು.
ಪ್ರತಿನಿತ್ಯ ಅರ್ಧಗಂಟೆ ಎಲ್ಲರೂ ಕೂಡ ಯೋಗಾಸನ ಮಾಡಬೇಕು. ಇದರಿಂದ ಉತ್ತಮ ಆರೋಗ್ಯ ಲಭಿಸುತ್ತದೆ. ದಶಕದಿಂದೀಚೆಗೆ ಯೋಗದ ಮಹತ್ವದ ಜನರಿಗೆ ಅರಿವಾಗಿದ್ದು, ಹೆಚ್ಚಿನ ಜನ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದು, ಯೋಗಾಭ್ಯಾಸದ ಕಡೆಗೆ ಒಲವು ಹೊಂದಿದ್ದಾರೆ ಎಂದರು.

ಯೋಗಾಸನದ ಮೂಲಕ ಶರೀರ, ಮನಸ್ಸು ಮತ್ತು ನರ-ನಾಡಿಗಳನ್ನು ಸದಾ ಕ್ರಿಯಾಶೀಲವಾಗಿಡುವಲ್ಲಿ ಸಹಕಾರಿಯಾಗದೇ ಮಾತ್ರವಲ್ಲ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ, ಪಿತ್ತಕೋಶ, ಕಿಡ್ನಿ ಮುಂತಾದವುಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಯೋಗಾಭ್ಯಾಸ ಉತ್ತಮವಾದುದಾಗಿದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Shivamogga-Bhadravathi Urban Development Authority ಊರುಗಡೂರು ನಿವೇಶನ ಹಂಚಿಕೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿ.5 ಅಂತಿಮ ದಿನಾಂಕ

Shivamogga-Bhadravathi Urban Development Authority ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ...

Shivamogga City Corporation ಒಂದು ತಿಂಗಳಲ್ಲಿ ಏಕರೀತಿಯ ಕರವಸೂಲಾತಿ ಹೊಸ ಕಾಯ್ದೆ ಜಾರಿ- ಸಚಿವ ರಹೀಂ ಖಾನ್

Shivamogga City Corporation ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ...